BLR Today
ಮಂಗಳವಾರ, ಅಕ್ಟೋಬರ್ 6, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru53 ನಿಮಿಷಗಳ ಹಿಂದೆ

ಕೆಪಿಎಸ್ಸಿ ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಗೀತಾ ಇಡಿ ವಶಕ್ಕೆ

ಕೆಪಿಎಸ್ಸಿ ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಗೀತಾ ಇಡಿ ವಶಕ್ಕೆ
ಚಿತ್ರ: TV9 Kannada

ಕೆಪಿಎಸ್ಸಿ ನೇಮಕಾತಿ ಅಕ್ರಮ ಸಂಬಂಧ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮತ್ತು ಸದಸ್ಯೆ ಬಿ.ವಿ. ಗೀತಾ ಅವರನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಅಕ್ಟೋಬರ್ 06 ರಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮನೆಯಲ್ಲೇ ಇದ್ದ ಶಿವಶಂಕರಪ್ಪನನ್ನು ವಿಚಾರಣೆ ನಡೆಸಿ ಬಳಿಕ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದೇ ಪ್ರಕರಣದಲ್ಲಿ ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ಅವರನ್ನು ಬೆಂಗಳೂರಿನ ಅವರ ಮನೆಯಲ್ಲೇ ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
KPSCEDBengaluruScamPolitics