BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru4 ದಿನಗಳ ಹಿಂದೆ

ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ಮತ್ತಷ್ಟು ಪರೀಕ್ಷೆಗಳಲ್ಲೂ ಅಕ್ರಮ ಬಯಲು, ಇಡಿ ಸ್ಫೋಟಕ ಮಾಹಿತಿ!

ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ಮತ್ತಷ್ಟು ಪರೀಕ್ಷೆಗಳಲ್ಲೂ ಅಕ್ರಮ ಬಯಲು, ಇಡಿ ಸ್ಫೋಟಕ ಮಾಹಿತಿ!
ಚಿತ್ರ: TV9 Kannada

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಹೈಕೋರ್ಟ್‌ನಲ್ಲಿ ಹಲವು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. ಈಗಾಗಲೇ ತನಿಖೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಿರುವ ಇಡಿ, ಕೆಪಿಎಸ್‌ಸಿ ಮೂಲಕ ನಡೆದ ಇತರ ನೇಮಕಾತಿ ಪರೀಕ್ಷೆಗಳಲ್ಲೂ ಅಕ್ರಮಗಳು ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ವಿಶೇಷವಾಗಿ ಒಎಂಆರ್ ಶೀಟ್ ತಿದ್ದುಪಡಿ, ಲಂಚದ ಹಣ ವಸೂಲಿ ಹಾಗೂ ನಕಲಿ ದಾಖಲೆಗಳ ಸೃಷ್ಟಿಯಂತಹ ಗಂಭೀರ ಆರೋಪಗಳು ಮುನ್ನೆಲೆಗೆ ಬಂದಿವೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
KPSCEDBengaluruRecruitment ScamHigh Court