BLR Today
ಗುರುವಾರ, ಸೆಪ್ಟೆಂಬರ್ 24, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಬೆಂಗಳೂರಿನ ರೈತರ ಪ್ರತಿಭಟನೆ

ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಬೆಂಗಳೂರಿನ ರೈತರ ಪ್ರತಿಭಟನೆ
ಚಿತ್ರ: Prajavani

ಕಾವೇರಿ ನೀರು ನಿಯಂತ್ರಣ ಮಂಡಳಿಯು ಕರ್ನಾಟಕದಿಂದ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ನಿತ್ಯ 4 ಸಾವಿರ ಕ್ಯುಸೆಕ್‌ ನೀರು ಹರಿಸುವಂತೆ ಶಿಫಾರಸು ಮಾಡಿರುವುದನ್ನು ಖಂಡಿಸಿ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಬಿಜೆಪಿ ಮುಖಂಡರು ಗುರುವಾರ ಬೆಂಗಳೂರಿನ ಜೆ.ಸಿ. ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಮಾವಣೆಗೊಂಡ ಮುಖಂಡರು ಬೆಂಗಳೂರು–ಮೈಸೂರು ಹಳೆ ಹೆದ್ದಾರಿ ಬಂದ್ ಮಾಡಿ ಘೋಷಣೆ ಕೂಗಿದರು. ರೈತ ಮುಖಂಡ ಶಿವಳ್ಳಿ ಚಂದ್ರಶೇಖರ್‌ ಮಾತನಾಡಿ, ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಸಾಕಷ್ಟು ನೀರಿಲ್ಲ ಹಾಗೂ ಒಳ ಹರಿವು ಸಂಪೂರ್ಣವಾಗಿ ನಿಂತಿದೆ. ಹೀಗಿರುವಾಗಿ ತಮಿಳುನಾಡಿಗೆ ನೀರು ಹರಿಸಿದರೆ ನಮ್ಮ ಪಾಡೇನು ಎಂದು ಕಿಡಿಕಾರಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruProtestWater CrisisKaveri River