ಬೆಂಗಳೂರು ಎಫ್‌ಸಿ ತಂಡವು ಮುಂಬೈ ಸಿಟಿ ಎಫ್‌ಸಿ ವಿರುದ್ಧ 2-0 ಗೆಲುವಿನೊಂದಿಗೆ ಅಜೇಯ ಓಟ ಮುಂದುವರಿಸಿತು
ಬೆಂಗಳೂರು ಎಫ್‌ಸಿ ತಂಡವು ಶುಕ್ರವಾರ ಮುಂಬೈ ಸಿಟಿ ಎಫ್‌ಸಿ ತಂಡವನ್ನು 2-0 ಗೋಲುಗಳಿಂದ ಮಣಿಸಿ ಇಂಡಿಯನ್ ಸೂಪರ್ ಲೀಗ್‌ನ ಹಾಲಿ ಆವೃತ್ತಿಯಲ್ಲಿ ಅಜೇಯ ಓಟವನ್ನು ಮುಂದುವರಿಸಿತು. ಬೋರ್ಜಾ ಮಾರ್ಟಿನೆಜ್, ರಯಾನ್ ವಿಲಿಯಮ್ಸ್ ಅವರು ಗಳಿಸಿದ ಗೋಲು ಮತ್ತು ಗೋಲ್‌ಕೀಪರ್ ಗುರುಪ್ರೀತ್ ಸಿಂಗ್ ಸಂಧು ಅವರ ಅದ್ಘುತ ಸೇವ್‌ಗಳ ಬಲದಿಂದ ಆತಿಥೇಯ ತಂಡವು ಕಂಠೀರವ ಕ್ರೀಡಾಂಗಣದಲ್ಲಿ ಗೆಲುವಿನ ಹ್ಯಾಟ್ರಿಕ್ ದಾಖಲಿಸಿತು. ಇದರೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲೂ ಅಗ್ರಸ್ಥಾನಕ್ಕೆ ಜಿಗಿಯಿತು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Bengaluru FCIndian Super LeagueSportsBengaluru


