BLR Today
ಗುರುವಾರ, ಅಕ್ಟೋಬರ್ 29, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ಮತ್ತಿಕೆರೆಯಲ್ಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ

ಮತ್ತಿಕೆರೆಯಲ್ಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಚಿತ್ರ: Prajavani

ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಹೋಟೆಲ್ ವೊಂದರಲ್ಲಿ ಬುಧವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಯಶವಂತಪುರದ 11ನೇ ಮುಖ್ಯ ರಸ್ತೆ, 4ನೇ ಅಡ್ಡ ರಸ್ತೆಯಲ್ಲಿರುವ ಕಣ್ಣೂರು ಫುಡ್ ಪಾಯಿಂಟ್ ಎಂಬ ಹೋಟೆಲ್‌ನಲ್ಲಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಘಟನೆಗೆ ನಿಖರ ಕಾರಣ ಏನು ಎಂಬು ದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruMattikereYeshwanthpurFireAccident