BLR Today
ಗುರುವಾರ, ಸೆಪ್ಟೆಂಬರ್ 24, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

KPSC ಗಂಭೀರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಮಾಜಿ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಹೈಕೋರ್ಟ್‌ಗೆ ಅರ್ಜಿ

KPSC ಗಂಭೀರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಮಾಜಿ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಹೈಕೋರ್ಟ್‌ಗೆ ಅರ್ಜಿ
ಚಿತ್ರ: Public TV

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಕೇಸಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿಂದೆ 52ನೇ ಸಿಸಿಹೆಚ್‌ ಕೋರ್ಟ್ ಶಾಂತಾ ಹೊಸಮನಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಸಿಐಡಿ ಅಧಿಕಾರಿಗಳಿಗೆ ಕೆಪಿಎಸ್‌ಸಿ ಅಕ್ರಮದಲ್ಲಿ ಶಾಂತಾ ಹೊಸಮನಿಯೇ ಕಿಂಗ್‌ಪಿನ್ ಎಂಬ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿವೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
KPSCHigh CourtShantha HosamaniBengaluruLegal Case