BLR Today
ಶುಕ್ರವಾರ, ಅಕ್ಟೋಬರ್ 9, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru1 ಗಂಟೆಗಳ ಹಿಂದೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ
ಚಿತ್ರ: Kannada Prabha

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಪ್ರಜ್ವಲ್ ರೇವಣ್ಣನ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ ನಂತರ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಶುಕ್ರವಾರ ಈ ಆದೇಶ ಹೊರಡಿಸಿದ್ದಾರೆ. ಡಿಜಿಪಿ ಅಲೋಕ್ ಕುಮಾರ್ ಅವರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಸೂಚಿಸಿದ್ದಾರೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮೂಲ ವರದಿ: Kannada Prabha ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Prajwal RevannaParapana Agrahar JailHindalgaon JailBengaluruCrime