ನೆಲಮಂಗಲದಲ್ಲಿ 17ರಿಂದ ಉಚಿತ ಕುರಿ ಸಾಕಣೆ ತರಬೇತಿ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕುರಿ ಸಾಕಾಣಿಕೆ ತರಬೇತಿಯನ್ನು ಡಿಸೆಂಬರ್ 17ರಿಂದ ಹಮ್ಮಿಕೊಳ್ಳಲಾಗಿದೆ. 19 ರಿಂದ 49 ವರ್ಷದೊಳಗಿನ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಆಧಾರ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿದ್ದರೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 7. ಹೆಚ್ಚಿನ ಮಾಹಿತಿಗಾಗಿ ರುಡ್‌ಸಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ಗಿರಿಧರ್ ಅವರು ಮೊಬೈಲ್ ಸಂಖ್ಯೆ 9740982585, 9481506564, 9380162042, 9241482541 ಸಂಪರ್ಕಿಸಲು ತಿಳಿಸಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.


