BLR Today
ಬುಧವಾರ, ಅಕ್ಟೋಬರ್ 28, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ಹೊಸಕೋಟೆಯಲ್ಲಿ ನಿರುದ್ಯೋಗಿಗಳಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ

ಹೊಸಕೋಟೆಯಲ್ಲಿ ನಿರುದ್ಯೋಗಿಗಳಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ
ಚಿತ್ರ: Prajavani

ಸೊಣ್ಣಹಳ್ಳಿಪುರ (ಹೊಸಕೋಟೆ): ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನ.12 ರಿಂದ 10 ದಿನಗಳ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗಾಗಿ ಏರ್ಪಡಿಸಲಾಗಿದೆ. 18 ರಿಂದ 50 ವರ್ಷ ವಯಸ್ಸಿನ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ನ.12ರಂದು ಬೆಳಿಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಹಾಜರಾಗಬೇಕು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruHoskoteTrainingEmployment