ಸೊಣ್ಣಹಳ್ಳಿಪುರದಲ್ಲಿ ಫಾಸ್ಟ್‌ಫುಡ್ ತಯಾರಿಕೆ ಉಚಿತ ತರಬೇತಿ ಶಿಬಿರ ಏರ್ಪಡಿಸಲಾಗಿದೆ
ಸೊಣ್ಣಹಳ್ಳಿಪುರದಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಪಾನಿ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಸೇರಿದಂತೆ ಚಾಟ್ಸ್ ತಯಾರಿಕೆ ಕುರಿತು ತರಬೇತಿ ನೀಡಲಾಗುತ್ತದೆ. 18ರಿಂದ 49 ವರ್ಷ ವಯಸ್ಸಿನ ನಿರುದ್ಯೋಗಿ ಪುರುಷ, ಮಹಿಳೆಯರು ಪಾಲ್ಗೊಳ್ಳಬಹುದು. ಈ ತರಬೇತಿ, ಊಟ ಮತ್ತು ವಸತಿ ಸೌಕರ್ಯ ಉಚಿತ. ನವೆಂಬರ್ 25ರ ಬೆಳಗ್ಗೆ 9.30ಕ್ಕೆ ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruHoskoteTrainingFast FoodEmployment


