BLR Today
ಶನಿವಾರ, ಅಕ್ಟೋಬರ್ 17, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್‌ಗಳ ಮೇಲೆ ದಾಳಿ ಮುಂದುವರಿಕೆ, ಎಫ್​ಎಸ್​ಎಸ್​ಎಐ ಕಠಿಣ ಕ್ರಮ

ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್‌ಗಳ ಮೇಲೆ ದಾಳಿ ಮುಂದುವರಿಕೆ, ಎಫ್​ಎಸ್​ಎಸ್​ಎಐ ಕಠಿಣ ಕ್ರಮ
ಚಿತ್ರ: TV9 Kannada

ದಸರಾ ಮತ್ತು ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸ್ವೀಟ್ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ದಾಳಿ ಮುಂದುವರೆಸಿ, ಗುಣಮಟ್ಟ ಮತ್ತು ನೈರ್ಮಲ್ಯವನ್ನು ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಒಟ್ಟು 90 ಕಡೆಗಳಲ್ಲಿ ದಾಳಿ ನಡೆಸಿ, ಎಫ್​ಎಸ್​ಎಸ್​ಎಐ ಅಧಿಕಾರಿಗಳು ಕೂಲಂಕಷ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 145 ವಿವಿಧ ಮಾದರಿಯ ಸ್ವೀಟ್ಸ್ ಸ್ಯಾಂಪಲ್ಸ್‌ಗಳನ್ನು ಸಂಗ್ರಹಿಸಲಾಗಿದೆ. ಸ್ವೀಟ್ ತಯಾರಿಕಾ ಘಟಕಗಳಲ್ಲಿ ಶುಚಿತ್ವ ಕಾಪಾಡದಿರುವುದು, ಸಿಬ್ಬಂದಿಗೆ ಕಡ್ಡಾಯವಾಗಿ ಇರಬೇಕಾದ ವೈದ್ಯಕೀಯ ಪ್ರಮಾಣಪತ್ರ ಇಲ್ಲದಿರುವುದು ಮತ್ತು ಉತ್ಪನ್ನಗಳ ಲೇಬಲಿಂಗ್‌ನಲ್ಲಿ ದೋಷಗಳು ದಾಳಿಯ ಸಂದರ್ಭದಲ್ಲಿ ಕಂಡುಬಂದಿವೆ. ಈ ಗಂಭೀರ ಲೋಪಗಳನ್ನು ಗಮನಿಸಿ, 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್ ನೀಡಲಾಗಿದೆ. ಅಲ್ಲದೆ, ಎರಡು ಉದ್ದಿಮೆಗಳಿಗೆ 7,000 ರೂಪಾಯಿ ದಂಡವನ್ನು ಕೂಡ ಅಧಿಕಾರಿಗಳು ವಿಧಿಸಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
FSSAIBengaluruSweet ShopsDasaraDeepavaliHygiene