BLR Today
ಮಂಗಳವಾರ, ಅಕ್ಟೋಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ಕಸ ವಿಲೇವಾರಿ ಗುತ್ತಿಗೆದಾರರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್‌ಡಬ್ಲ್ಯುಎಂಎಲ್‌) ವ್ಯವಸ್ಥಾಪಕ ನಿರ್ದೇಶಕರು ಭರವಸೆ ನೀಡಿದ್ದಾರೆ

ಕಸ ವಿಲೇವಾರಿ ಗುತ್ತಿಗೆದಾರರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್‌ಡಬ್ಲ್ಯುಎಂಎಲ್‌) ವ್ಯವಸ್ಥಾಪಕ ನಿರ್ದೇಶಕರು ಭರವಸೆ ನೀಡಿದ್ದಾರೆ
ಚಿತ್ರ: Prajavani

ಕಸ ವಿಲೇವಾರಿ ಗುತ್ತಿಗೆದಾರರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್‌ಡಬ್ಲ್ಯುಎಂಎಲ್‌) ವ್ಯವಸ್ಥಾಪಕ ನಿರ್ದೇಶಕರು ಭರವಸೆ ನೀಡಿದ್ದಾರೆ. ಹೀಗಾಗಿ ಕಸ ಸಂಗ್ರಹ ಸ್ಥಗಿತಗೊಳಿಸಿ, ಮುಷ್ಕರ ನಡೆಸುವುದನ್ನು ಗುತ್ತಿಗೆದಾರರು ಗುರುವಾರದವರೆಗೆ ವಾಪಸ್‌ ಪಡೆದಿದ್ದಾರೆ. ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತರೂ ಆಗಿರುವ ಬಿಎಸ್‌ಡಬ್ಲ್ಯುಎಂಎಲ್‌ನ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್‌ ರಾವ್‌ ಅವರು, ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಗುತ್ತಿಗೆದಾರರ ಸಭೆಯನ್ನು ಅ.29ರಂದು ಆಯೋಜಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಮನೆಗಳಿಂದ ಕಸ ಸಂಗ್ರಹ, ವಿಲೇವಾರಿ ಕಾರ್ಯ ಮಂಗಳವಾರದಿಂದ ನಡೆಯಲಿದೆ’ ಎಂದು ಬೆಂಗಳೂರು ಮಹಾನಗರ ಸ್ವಚ್ಛತೆ ಮತ್ತು ಲಾರಿ ಮಾಲೀಕರ–ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್‌.ಎನ್‌. ಬಾಲಸುಬ್ರಮಣಿಯಂ ತಿಳಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruWaste ManagementBSWMALContractorsS.N. Balasubramaniam