BLR Today
ಗುರುವಾರ, ಅಕ್ಟೋಬರ್ 22, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru46 ನಿಮಿಷಗಳ ಹಿಂದೆ

ಬೆಂಗಳೂರಿನಲ್ಲಿ ನಿಯಮ ಪಾಲಿಸದ ಪಿಜಿಗಳಿಗೆ ಜಿಬಿಎ ಬಿಗ್ ಶಾಕ್; 909 ಪಿಜಿಗಳಿಗೆ ನೋಟಿಸ್

ಬೆಂಗಳೂರಿನಲ್ಲಿ ನಿಯಮ ಪಾಲಿಸದ ಪಿಜಿಗಳಿಗೆ ಜಿಬಿಎ ಬಿಗ್ ಶಾಕ್; 909 ಪಿಜಿಗಳಿಗೆ ನೋಟಿಸ್
ಚಿತ್ರ: TV9 Kannada

ಬೆಂಗಳೂರಿನಲ್ಲಿ ನಿಯಮಗಳನ್ನು ಪಾಲಿಸದ ಪೇಯಿಂಗ್ ಗೆಸ್ಟ್‌ (ಪಿಜಿ) ವಸತಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬಿಸಿ ಮುಟ್ಟಿಸಿದೆ. ಹೈಕೋರ್ಟ್ ಆದೇಶದ ಅನ್ವಯ ನಿಯಮ ಪಾಲಿಸದ ಪಿಜಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಜಿಬಿಎ, ಬೆಂಗಳೂರು ದಕ್ಷಿಣ ವಿಭಾಗದ ವ್ಯಾಪ್ತಿಯಲ್ಲಿ ಈಗಾಗಲೇ 909 ಪಿಜಿಗಳಿಗೆ ನೋಟಿಸ್ ನೀಡಿದೆ. ಈ ಪೈಕಿ ಕೇವಲ 279 ಪಿಜಿಗಳು ನಿಯಮಗಳನ್ನು ಪಾಲಿಸಿರುವ ಬಗ್ಗೆ ಸ್ಪಷ್ಟನೆ ನೀಡಿವೆ. ಇನ್ನು 600ಕ್ಕೂ ಹೆಚ್ಚು ಪಿಜಿಗಳು ಅಧಿಕೃತ ಪರವಾನಗಿ ಹೊಂದಿಲ್ಲ ಎಂಬುದು ಪರಿಶೀಲನೆಯ ವೇಳೆ ಪತ್ತೆಯಾಗಿದೆ. ಹೀಗಾಗಿ, ನಿಯಮ ಪಾಲಿಸದ ಪಿಜಿಗಳ ಮೇಲೆ ಜಿಬಿಎ ಅಧಿಕಾರಿಗಳು ನಿಗಾ ಇರಿಸಿದ್ದಾರೆ. ಈಗಾಗಲೇ ನೋಟಿಸ್ ನೀಡಿದ್ದರೂ ಅಗತ್ಯ ನಿಯಮಗಳನ್ನು ಪಾಲಿಸದ ಮತ್ತು ಅಧಿಕೃತ ಪರವಾನಗಿ ಹೊಂದಿರದ 600ಕ್ಕೂ ಹೆಚ್ಚು ಪಿಜಿಗಳಿಗೆ ಜಿಬಿಎ ಎರಡನೇ ಬಾರಿಗೆ ನೋಟಿಸ್ ನೀಡಿದೆ. ಎರಡನೇ ನೋಟಿಸ್‌ಗೂ ಉತ್ತರ ನೀಡದಿದ್ದರೆ ಅಂತಹ ಪಿಜಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruGBAPGNoticeHigh Court