BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru3 ದಿನಗಳ ಹಿಂದೆ

ಬೆಂಗಳೂರಿನ ಪ್ರಮುಖ ರಾಜಕೀಯ ಹುದ್ದೆಗಳಿಗೆ ಶಾಸಕರ ನೇಮಕಕ್ಕೆ ಸರ್ಕಾರ ಅಧಿಸೂಚನೆ

ಬೆಂಗಳೂರಿನ ಪ್ರಮುಖ ರಾಜಕೀಯ ಹುದ್ದೆಗಳಿಗೆ ಶಾಸಕರ ನೇಮಕಕ್ಕೆ ಸರ್ಕಾರ ಅಧಿಸೂಚನೆ
ಚಿತ್ರ: Prajavani

ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂದು ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಅಧಿಸೂಚನೆ ಹೊರಡಿಸಿದೆ. ಅದೇ ರೀತಿ, ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕರನ್ನಾಗಿ ನೇಮಿಸಿ ವಿಧಾನಸಭಾ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಮುಖ್ಯ ಸಚೇತಕರಾಗಿದ್ದ ಅಶೋಕ ಎಂ. ಪಟ್ಟಣ ಅವರು ಸೋಮವಾರ ರಾಜೀನಾಮೆ ನೀಡಿದ ನಂತರ ಬೇಳೂರು ಅವರನ್ನು ನೇಮಿಸಲಾಗಿದೆ. ಮಂಜುನಾಥ ಭಂಡಾರಿ ಅವರನ್ನು ವಿಧಾನ ಪರಿಷತ್‌ ಮುಖ್ಯ ಸಚೇತರನ್ನಾಗಿ ನೇಮಿಸಿ ವಿದಾನ ಪರಿಷತ್‌ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPoliticsMLAsAppointments