ರಾಜ್ಯಪಾಲ ಸುಧಾ ಯಾದವ್ ಮತ್ತು ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ಚರ್ಚೆ
ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ಅವರು ನೂತನ ರಾಜ್ಯಪಾಲರಾದ ಸುಧಾ ಯಾದವ್ ಅವರನ್ನು ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ವಿಧಾನಪರಿಷತ್‌ನ ಇತಿಹಾಸ, ಪರಂಪರೆ, ಸಭಾಪತಿ ಸ್ಥಾನ, ಆಡಳಿತ–ವಿರೋಧ ಪಕ್ಷಗಳ ಕಾರ್ಯವೈಖರಿ, ಶಾಸನ ರಚನೆಯಲ್ಲಿ ಪರಿಷತ್ ವಹಿಸುವ ಜವಾಬ್ದಾರಿ, ನೀಡುವ ಸಲಹೆ, ಸಹಕಾರ ಕುರಿತು ಮಾಹಿತಿ ನೀಡಲಾಯಿತು ಎಂದು ತಿಳಿಸಿದರು. ಅಲ್ಲದೆ, ಜನಸಾಮಾನ್ಯರ ಕಷ್ಟಗಳಿಗೆ ಪರಿಷತ್‌ನ ಸ್ಪಂದನೆ, ಬರಪರಿಸ್ಥಿತಿ, ಕಸ್ತೂರಿ ರಂಗನ್ ವರದಿಯ ಅನುಷ್ಠಾನ ಕುರಿತು ಚರ್ಚೆ ನಡೆಸಲಾಯಿತು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruKarnatakaPolitics


