‘ಹಿರಣ್ಯಾಕ್ಷ’ನ ಪಾಪದ ಕೊಡ ತುಂಬುತ್ತಿದೆ’: ಎಚ್.ಡಿ.ಕುಮಾರಸ್ವಾಮಿ
‘ಬಿಡದಿ ಭೂಮಿ 'ರಿಯಲ್ ಎಸ್ಟೇಟ್ ವ್ಯಾಪಾರಿ' ಕಪಿಮುಷ್ಟಿಗೆ ಸಿಲುಕಿದೆ. ನೆನಪಿರಲಿ, 'ಹಿರಣ್ಯಾಕ್ಷ'ನ ಪಾಪದ ಕೊಡ ತುಂಬುತ್ತಿದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್‘ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಕರ್ನಾಟಕದಲ್ಲಿ ನಾಗರಿಕ ಸರ್ಕಾರವಿದೆಯೋ ಅಥವಾ ರಾಕ್ಷಸ ಸರ್ಕಾರ ಇದೆಯೋ? ತಮ್ಮ ಭೂಮಿ ಉಳಿಸಿಕೊಳ್ಳಲು ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರು. ಬಲಪ್ರಯೋಗದಿಂದ ಅವರನ್ನು ಹತ್ತಿಕ್ಕಲೆತ್ನಿಸಿರುವುದು ದುಷ್ಪ್ರಯತ್ನ ಖಂಡನಾರ್ಹ’ ಎಂದು ಕಿಡಿಕಾರಿದ್ದಾರೆ. ಬಿಡದಿಯ ಭೈರಮಂಗಲದಲ್ಲಿ ರೈತರ ಮೇಲೆ ಪೊಲೀಸರು ನಡೆಸಿರುವ ದಬ್ಬಾಳಿಕೆ 'ದೈವದ್ರೋಹ'ಕ್ಕೂ ಮೀರಿದ್ದು. ಧರಣಿ ಕೂರಲು ಸಿದ್ಧತೆ ಮಾಡಿಕೊಳ್ಳುವಾಗ ಅದನ್ನು ತಡೆಹಿಡಿದು, ಅನ್ನದಾತರನ್ನು ಉರಿಬಿಸಿಲಿನಲ್ಲೇ ಕೂರಿಸಿರುವ ಪೊಲೀಸರ ವರ್ತನೆ ಅಕ್ಷಮ್ಯ. ಇಂತಹ ಕೃತ್ಯಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
H.D. KumaraswamyBidadi BhumigalaReal EstateProtestBengaluru

