BLR Today
ಗುರುವಾರ, ನವೆಂಬರ್ 5, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru59 ನಿಮಿಷಗಳ ಹಿಂದೆ

ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ 24 ಗಂಟೆಗಳ ಅವಧಿಯು ಬಂಧನದ ಸಮಯದಿಂದ ಪ್ರಾರಂಭವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ

ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ 24 ಗಂಟೆಗಳ ಅವಧಿಯು ಬಂಧನದ ಸಮಯದಿಂದ ಪ್ರಾರಂಭವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ
ಚಿತ್ರ: Prajavani

ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ 24 ಗಂಟೆಗಳ ಅವಧಿಯು ಬಂಧನದ ಸಮಯದಿಂದ ಪ್ರಾರಂಭವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಜಾಮೀನು ಕೋರಿ ಸಕಲೇಶಪುರ ತಾಲ್ಲೂಕಿನ ಮಸುವಳ್ಳಿಯ ನವೀನ್‌ (35) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿರುವ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಈ ಪ್ರಕರಣದಲ್ಲಿ ಅರ್ಜಿದಾರರು 2025ರ ಅಕ್ಟೋಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಪೊಲೀಸರ ಮುಂದೆ ಸ್ವಯಂ ಶರಣಾಗಿದ್ದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
High CourtLegalBengaluru