BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ದಿನಗಳ ಹಿಂದೆ

ಸಿಇಟಿ–ಜನಿವಾರ: ಏಕರೂಪ ವ್ಯವಸ್ಥೆ ಕಾಪಾಡಲು ನಿರ್ದೇಶನ

ಸಿಇಟಿ–ಜನಿವಾರ: ಏಕರೂಪ ವ್ಯವಸ್ಥೆ ಕಾಪಾಡಲು ನಿರ್ದೇಶನ
ಚಿತ್ರ: Prajavani

ಸಿಇಟಿ–ಜನಿವಾರ: ಏಕರೂಪ ವ್ಯವಸ್ಥೆ ಕಾಪಾಡಲು ನಿರ್ದೇಶನ

ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಹಾಜರಾದ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿದಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಪರೀಕ್ಷೆಗಳನ್ನು ಸಮರ್ಪಕವಾಗಿ ನಡೆಸಲು ಏಕರೂಪ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಹೈಕೋರ್ಟ್‌, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಿರ್ದೇಶಿಸಿದೆ. ‘ಸಿಇಟಿ ನಿರ್ವಹಣೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿನ ದೈಹಿಕ ತಪಾಸಣೆಗೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶಿಸಬೇಕು’ ಎಂದು ಕೋರಿ ‘ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ’ ಅಧ್ಯಕ್ಷ ಎಸ್‌. ರಘುನಾಥ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್‌ ನೇತೃತ್ವದ ದ್ವಿಸದಸ್ಯ ನ್ಯಾಯಪೀಠ ವಿಲೇವಾರಿ ಮಾಡಿದೆ. ಈ ದಿಸೆಯಲ್ಲಿ ಪರೀಕ್ಷೆಯ ಹೊಣೆ ಹೊತ್ತ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಮತ್ತು ಸಂಬಂಧಿಸಿದವರಿಗೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಕೆಇಎಗೆ ಆದೇಶಿಸಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
High CourtKEABengaluruExamsEducation