BLR Today
ಮಂಗಳವಾರ, ಅಕ್ಟೋಬರ್ 6, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಕಸಾಪ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಮಹೇಶ್‌ ಜೋಶಿ ಸಲ್ಲಿಸಿದ್ದ ಅರ್ಜಿ ವಜಾ

ಕಸಾಪ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಮಹೇಶ್‌ ಜೋಶಿ ಸಲ್ಲಿಸಿದ್ದ ಅರ್ಜಿ ವಜಾ
ಚಿತ್ರ: Prajavani

ಕನ್ನಡ ಸಾಹಿತ್ಯ ಪರಿಷತ್‌ಗೆ (ಕಸಾಪ) ಆಡಳಿತಾಧಿಕಾರಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಅಧ್ಯಕ್ಷ ಮಹೇಶ್‌ ಜೋಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಕುರಿತಂತೆ 2025ರ ಅಕ್ಟೋಬರ್ 29ರಂದು ಮಹೇಶ್‌ ಜೋಶಿ ಸಲ್ಲಿಸಿದ್ದ ರಿಟ್‌ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಅಂತಿಮ ಆದೇಶವನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿತು. ಮಹೇಶ್‌ ಜೋಶಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪರಿಷತ್ತಿನಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಸಾಪ ಆಡಳಿತ ಮಂಡಳಿಯನ್ನು ಬದಿಗಿಟ್ಟು ಆಡಳಿತಾಧಿಕಾರಿ ನೇಮಕ ಮಾಡಿ 2025ರ ಸೆಪ್ಟೆಂಬರ್ 30ರಂದು ಆದೇಶ ಹೊರಡಿಸಿತ್ತು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Kannada Sahitya ParishatHigh CourtMahesh JoshiBengaluru