BLR Today
ಸೋಮವಾರ, ಅಕ್ಟೋಬರ್ 26, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru2 ಗಂಟೆಗಳ ಹಿಂದೆ

ಅಕ್ರಮ ಸಿಮ್ ಕಾರ್ಡ್ ಮಾರಾಟದ ಬಗ್ಗೆ ಹೈಕೋರ್ಟ್ ಕಳವಳ; ಪ್ರಕ್ರಿಯೆಗಳ ಪರಿಶೀಲನೆಗೆ ಆದೇಶ

ಅಕ್ರಮ ಸಿಮ್ ಕಾರ್ಡ್ ಮಾರಾಟದ ಬಗ್ಗೆ ಹೈಕೋರ್ಟ್ ಕಳವಳ; ಪ್ರಕ್ರಿಯೆಗಳ ಪರಿಶೀಲನೆಗೆ ಆದೇಶ
ಚಿತ್ರ: Prajavani

ಅನುಮತಿಯಿಲ್ಲದೆ ಆಧಾರ ಕಾರ್ಡ್ ಸಂಖ್ಯೆ ಹಾಗೂ ಗ್ರಾಹಕರ ದಾಖಲೆಗಳನ್ನು ಬಳಸಿಕೊಂಡು ಅಕ್ರಮವಾಗಿ ಸಿಮ್ ಕಾರ್ಡ್‌ಗಳನ್ನು ಸಕ್ರಿಯಗೊಳಿಸಿ ಮಾರಾಟ ಮಾಡುವ ಜಾಲದ ಬಗ್ಗೆ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. 'ನನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು' ಎಂದು ಕೋರಿ ನಗರದ ಅಬ್ಬಾರೆಡ್ಡಿ ಲೇ ಔಟ್‌ನ ಮಲ್ಲಿಕಾರ್ಜುನ ಬಿನ್ ಪರ್ವತ ರೆಡ್ಡಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ. 'ಈ ರೀತಿಯ ಪ್ರಕರಣಗಳ ತನಿಖೆ ನಡೆಸುವುದಕ್ಕಾಗಿ ಅಗತ್ಯ ಮಾರ್ಗಸೂಚಿ ರೂಪಿಸಿ' ಎಂದು ಸೈಬರ್ ಕಮಾಂಡ್‌ ಪೊಲೀಸ್ ಮಹಾ ನಿರ್ದೇಶಕರಿಗೆ ಆದೇಶಿಸಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
High CourtSIM CardBengaluruCrimeCyber Security