BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru5 ದಿನಗಳ ಹಿಂದೆ

ಅಂಚೆ ಮತಗಳ ಮರುಎಣಿಕೆ ಸಂದರ್ಭ ಅಕ್ರಮ ಆರೋಪ: ಜೀವರಾಜ್‌ ವಿರುದ್ಧದ ಪ್ರಕರಣ ರದ್ದು

ಅಂಚೆ ಮತಗಳ ಮರುಎಣಿಕೆ ಸಂದರ್ಭ ಅಕ್ರಮ ಆರೋಪ: ಜೀವರಾಜ್‌ ವಿರುದ್ಧದ ಪ್ರಕರಣ ರದ್ದು
ಚಿತ್ರ: Prajavani

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಮತ ಎಣಿಕೆ ಸಂದರ್ಭ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಹಾಗೂ ಇತರರ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಶಾಸಕ ಟಿ.ಡಿ.ರಾಜೇಗೌಡ ಅವರ ಚುನಾವಣಾ ಏಜೆಂಟ್ ಸುಧೀರ್ ಕುಮಾರ್ ಮುರೊಳ್ಳಿ ನೀಡಿದ ದೂರಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದ ಮೇಲಿನ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ಪ್ರಕಟಿಸಿತು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
High CourtD.N. JeevarajShringeriElection Dispute