ಬೆಂಗಳೂರಿನ 'ಹನಿಟ್ರ್ಯಾಪ್' ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
ವಧು–ವರ ಅನ್ವೇಷಣೆಯ ಜಾಲತಾಣದಲ್ಲಿ ಸಂಪರ್ಕಕ್ಕೆ ಬಂದ ಯುವಕನಿಂದ ಹಣ ವಸೂಲಿ ಮಾಡಿ ಆತನನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧದ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸರು ಮಾಹಿತಿ ತಂತ್ರಜ್ಞಾನ (ಐಟಿ) ಮತ್ತು ಭಾರತೀಯ ದಂಡ ಸಂಹಿತೆ ಕಾಯ್ದೆ ವಿವಿಧ ಕಲಂಗಳ ಅಡಿಯಲ್ಲಿ ಅರ್ಜಿದಾರರ ವಿರುದ್ಧ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿ ಅನುಸಾರ ನಗರದ 1ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆ ಮುಂದುವರಿಸಲು ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕಥಾ ಬಜಾರ್ ನಿವಾಸಿಗಳಾದ ಇರಂ ಪಠಾಣ್ (26) ಮತ್ತು ಅವರ ತಾಯಿ ರಷೀದಾ ಸಮೀರ್ ಪಠಾಣ್ (53) ಹಾಗೂ ಅವಾಯಿಝ್ ಪಠಾಣ್ (30) ಸಮೀರ್ ಪಠಾಣ್ (64) ಅರ್ಜಿ ಸಲ್ಲಿಸಿದ್ದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruHigh CourtLegalCrime


