BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru6 ದಿನಗಳ ಹಿಂದೆ

ಪ್ರತಾಪ್ ಸಿಂಹ ವಿರುದ್ಧದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ

ಪ್ರತಾಪ್ ಸಿಂಹ ವಿರುದ್ಧದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ
ಚಿತ್ರ: Prajavani

ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಗಲಭೆ ಪ್ರಚೋದಿಸುವ ಮತ್ತು ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರತಕ್ಕಂತಹ ಆರೋಪಗಳ ಕುರಿತು ಅವರ ವಿರುದ್ಧ ತನಿಖೆ ನಡೆಸುವ ಅಗತ್ಯವನ್ನು ಪ್ರಕರಣ ಸೂಚಿಸುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಈ ಪ್ರಕರಣದ ಇತರ ಆರೋಪಿಗಳಾದ ಕರಣ್‌ ಸಿ ಸುಬೇದಾರ್, ಶಿವಕುಮಾರ್ ಮತ್ತು ಗುರುರಾಜ ವಿರುದ್ಧದ ವಿಚಾರಣೆಯನ್ನು ನ್ಯಾಯಪೀಠ ಇದೇ ವೇಳೆ ರದ್ದುಪಡಿಸಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Pratap SinghHigh CourtBengaluruCommunal HarmonyPolitics