ಅನಧಿಕೃತ ಗೈರು ಹಾಜರಿಗೆ ತಾಯ್ತನದ ರಜೆಯ ಗುರಾಣಿ: ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್
ತಾಯ್ತನದ ರಜೆಯನ್ನು ದೀರ್ಘ ಕಾಲದ ಅನಧಿಕೃತ ಗೈರುಹಾಜರಿಗೆ ಅನುಕೂಲಕರ ಗುರಾಣಿಯಾಗಿ ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಜಿಲ್ಲಾ ನ್ಯಾಯಾಲಯದ ಸಾಫ್ಟ್ವೇರ್ ತಂತ್ರಜ್ಞೆಯೊಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದ್ದ ಕ್ರಮವನ್ನು ಎತ್ತಿಹಿಡಿದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ನ್ಯಾಯಾಲಯದಲ್ಲಿ ಸಾಫ್ಟ್ವೇರ್ ಟೆಕ್ನೀಶಿಯನ್ ಕರ್ತವ್ಯ ನಿರ್ವಹಿಸುತ್ತಿದ್ದ ಮೋನಿಕಾ (36) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ. ‘ಮಗುವಿನ ಜನನವನ್ನೇ ಮುಂದು ಮಾಡಿಕೊಂಡು ಸರ್ಕಾರಿ ಉದ್ಯೋಗದ ಜವಾಬ್ದಾರಿಗಳಿಂದ ಶಾಶ್ವತವಾಗಿ ದೂರ ಉಳಿಯುವುದಕ್ಕೆ ಅವಕಾಶವಿಲ್ಲ‘ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
High CourtBengaluru RuralService DismissalMaternity Leave


