BLR Today
ಗುರುವಾರ, ಅಕ್ಟೋಬರ್ 29, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸುರಕ್ಷತೆ ಮತ್ತು ವಿಸ್ತರಣೆಗಾಗಿ ಭೂ ಸ್ವಾಧೀನ ಪ್ರಕ್ರಿಯೆಗೆ ಹೈಕೋರ್ಟ್ ಅಸ್ತು

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸುರಕ್ಷತೆ ಮತ್ತು ವಿಸ್ತರಣೆಗಾಗಿ ಭೂ ಸ್ವಾಧೀನ ಪ್ರಕ್ರಿಯೆಗೆ ಹೈಕೋರ್ಟ್ ಅಸ್ತು
ಚಿತ್ರ: Prajavani

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸುರಕ್ಷತೆ, ವಿಸ್ತರಣೆ ಮತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕಾಗಿ ನಡೆಸಲಾಗಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಹೈಕೋರ್ಟ್‌ ದ್ವಿಸದಸ್ಯ ನ್ಯಾಯಪೀಠ ಎತ್ತಿ ಹಿಡಿದಿದೆ. ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ರಿಟ್‌ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಹಾಗೂ ನ್ಯಾಯಮೂರ್ತಿ ಎಚ್.ಶಾಂತಿಭೂಷಣ್ ಅವರನ್ನು ಒಳಗೊಂಡ ದ್ವಿಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ‘ಪರಪ್ಪನ ಅಗ್ರಹಾರ ಜೈಲಿನಲ್ಲಿ ಐದು ಸಾವಿರಕ್ಕೂ ಹೆಚ್ಚು ಕೈದಿಗಳಿದ್ದು, ಜೈಲಿನ ಸುತ್ತಲೂ ಬಹುಮಹಡಿ ಕಟ್ಟಡಗಳು ನಿರ್ಮಾಣಗೊಂಡರೆ ಭದ್ರತೆಗೆ ಬೆದರಿಕೆ ಉಂಟಾಗಲಿದೆ’ ಎಂಬ ಸರ್ಕಾರದ ವಾದವನ್ನು ಪುರಸ್ಕರಿಸಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruHigh CourtLand AcquisitionParapana Agrahar Jail