ಹಿಂಗಾರು ಹಂಗಾಮಿಗೆ ನೀರು: 19ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ
2026–27ನೇ ಸಾಲಿನ ಮುಂಗಾರು ಹಂಗಾಮಿನಿ ಬಾಕಿ ಅವಧಿ ಮತ್ತು ಹಿಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಚರ್ಚಿಸಲು ಅ. 19ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ವಿಕಾಸಸೌಧದಲ್ಲಿ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ನಡೆಯಲಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಿವರಾಜ ತಂಗಡಗಿ ಸಮಿತಿಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಾಮಾನ್ಯವಾಗಿ ಭತ್ತ ಬೆಳೆಯಲು 120 ದಿನ ನೀರು ಹರಿಸಬೇಕು. ಹಿಂದಿನ ಸಭೆಯಲ್ಲಿ 90 ದಿನಗಳಿಗಷ್ಟೇ ನೀರು ಕೊಡಲಾಗಿದೆ. ಆದರೆ ಉಳಿದ 30 ದಿನಗಳಿಗೆ ನೀರು ಹರಿಸುವ ಬಗ್ಗೆ ಚರ್ಚೆ ನಡೆಯಲಿದೆ. ಒಟ್ಟು 105.788 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಬುಧವಾರ (ಅ. 14) ವೇಳೆಗೆ 58.901 ಟಿಎಂಸಿ ಅಡಿ ನೀರು ಮಾತ್ರ ಇದೆ. 11,850 ಕ್ಯುಸೆಕ್ ಹೊರಹರಿವು ಇರುವುದರಿಂದ ಈಗಿರುವ ಬೆಳೆಗೆ ನೀರು ಹೊಂದಿಸುವುದೇ ಅಧಿಕಾರಿಗಳಿಗೆ ಸವಾಲಾಗಿದೆ. ಒಳಹರಿವು ಸಂಪೂರ್ಣವಾಗಿ ಸ್ಥಗಿತವಾಗಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruWaterAgricultureMeeting


