ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಕನಕದಾಸರ ಜಯಂತಿ ಆಚರಣೆ
ಶುಕ್ರವಾರ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕಚೇರಿಯಲ್ಲಿ ಕನಕದಾಸರ ಜಯಂತಿ ಆಚರಿಸಲಾಯಿತು. ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕುಲಪತಿ ಪ್ರೊ.ಬಿ.ಕೆ.ರವಿ ಅವರು, ‘ಕನಕದಾಸರು ಪ್ರತಿಪಾದಿಸಿದ ಸಮಾನತೆ, ಆದರ್ಶದ ಹಾದಿಯಲ್ಲಿ ನಾವು ನಡೆದಾಗ ಮಾತ್ರವೇ ಕನಕದಾಸರ ಜಯಂತಿ ಅರ್ಥಪೂರ್ಣವಾಗಲಿದೆ’ ಎಂದರು. ಐದುನೂರು ವರ್ಷಗಳ ಹಿಂದೆಯೇ ಕನಕದಾಸರು ಅಸಮಾನತೆ, ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಪಿಡುಗುಗಳು ಎಂದು ಭಾವಿಸಿ ಅದರ ವಿರುದ್ಧ ಸಾಹಿತ್ಯ, ಸಂಗೀತದ ಮೂಲಕ ಸಮರ ಸಾರಿದ್ದರು ಎಂದು ಅವರು ಹೇಳಿದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruUniversityKanaka Dasara

