ಎಸ್.ಆರ್. ಶಿಕ್ಷಣ ಸಂಸ್ಥೆಯಲ್ಲಿ ಕರಾಟೆ ಪರೀಕ್ಷೆ
ಹೆಬಲೆಯಲ್ಲಿರುವ ಎಸ್.ಆರ್. ಶಿಕ್ಷಣ ಸಂಸ್ಥೆಯಲ್ಲಿ ಕರಾಟೆ ತರಗತಿಯ ಬೆಲ್ಟ್ ಪರೀಕ್ಷೆ ನಡೆಯಿತು. ವಿಜೇತ ವಿದ್ಯಾರ್ಥಿಗಳು ಬಿಳಿ, ಹಳದಿ ಬೆಲ್ಟ್ ಪಡೆದರು. ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್. ನಾಗರಾಜ್ ಶೆಟ್ಟಿ ಮಾತನಾಡಿ, ‘ಕರಾಟೆ ನಮ್ಮಲ್ಲಿ ಶಿಸ್ತು, ಸಂಯಮ, ದೈಹಿಕ ಮತ್ತು ಮಾನಸಿಕ ಸದೃಢತೆ ಉಂಟು ಮಾಡುತ್ತದೆ. ಆತ್ಮಸ್ಥೈರ್ಯ ವೃದ್ಧಿಸುತ್ತದೆ’ ಎಂದರು. ಬೆಂಗಳೂರಿನ ಖುಷಿ ಬಯೊ ಟೆಕ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಉಮೇಶ ಶೆಟ್ಟಿ ಮಾತನಾಡಿ, ‘ಇಂದು ವಿದ್ಯಾರ್ಥಿಗಳಿಗೆ ಅವಕಾಶಗಳು ಯಥೇಚ್ಛವಾಗಿವೆ. ಅವನ್ನು ಸದುಪಯೋಗಪಡಿಸಿಕೊಳ್ಳಿ. ಕರಾಟೆ ವಿದ್ಯಾರ್ಥಿಗಳ ಏಕಾಗ್ರತೆ, ಚುರುಕುತನವನ್ನು ಇನ್ನಷ್ಟು ಬಲಪಡಿಸುತ್ತದೆ’ ಎಂದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruEducationSports


