ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಕೋರ್ಸ್ಗಳ ಅಂತಿಮ ಫಲಿತಾಂಶ ಪ್ರಕಟ
ಎಂ.ಬಿ.ಎ, ಎಂ.ಸಿ.ಎ, ಎಂ.ಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ಗಳ ಪ್ರವೇಶದ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಅ. 19ರೊಳಗೆ ಶುಲ್ಕ ಪಾವತಿಸಿ, ಅ. 23ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. ನರ್ಸಿಂಗ್ ಕೋರ್ಸ್: ಬಿಎಸ್ಸಿ ನರ್ಸಿಂಗ್ ಮತ್ತು ಎಎಚ್ಎಸ್ ಲ್ಯಾಟರಲ್ ಕೋರ್ಸ್ಗಳ ಪ್ರವೇಶಕ್ಕೆ ಆಯ್ಕೆಗಳನ್ನು ದಾಖಲಿಸಲು ಅ. 19ರಂದು ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ. ಅಂದು ಸಂಜೆ 4ಕ್ಕೆ ಅಣಕು ಫಲಿತಾಂಶ ಪ್ರಕಟಿಸಲಾಗುತ್ತದೆ. ಅ. 19ರಂದು ಸಂಜೆ 5ರಿಂದ ಅ. 22ರ ಬೆಳಿಗ್ಗೆ 11ರವರೆಗೆ ಆಯ್ಕೆಗಳನ್ನು ಬದಲಿಸಿಕೊಳ್ಳಲು, ಸೇರಿಸಲು ಅವಕಾಶ ನೀಡಲಾಗಿದೆ. ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruEducationAdmissionsKarnataka Examination Authority

