BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ದಿನಗಳ ಹಿಂದೆ

ಕರ್ನಾಟಕ ರಾಜ್ಯ ಕ್ರೀಡಾಪಟುಗಳ ಹೋರಾಟ ಸಮಿತಿ 25ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ

ಕರ್ನಾಟಕ ರಾಜ್ಯ ಕ್ರೀಡಾಪಟುಗಳ ಹೋರಾಟ ಸಮಿತಿ 25ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ
ಚಿತ್ರ: Prajavani

ನೇರ ನೇಮಕಾತಿ ಹಾಗೂ ವಿಶೇಷ ನೇಮಕಾತಿ ಮಾಡಿಕೊಳ್ಳಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕ್ರೀಡಾಪಟುಗಳ ಹೋರಾಟ ಸಮಿತಿಯಿಂದ ನ.25ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯದರ್ಶಿ ರಾಘವೇಂದ್ರ ತಿಳಿಸಿದರು. ‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಅಂಗವಿಕಲ ಕ್ರೀಡಾಪಟುಗಳಿಗೆ ಶೇ 3ರಷ್ಟು ಮೀಸಲಾತಿ ಕಲ್ಪಿಸಬೇಕು’ ಎಂದು ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ‘ಟಿ.ಎಂ. ವಿಜಯಭಾಸ್ಕರ್‌ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು. ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಹಾಗೂ ಪದಕ ಪಡೆದ ಕ್ರೀಡಾಪಟುಗಳಿಗೆ ಆಯಾ ವರ್ಷದಲ್ಲೇ ಸೂಕ್ತ ನಗದು ಪುರಸ್ಕಾರ ನೀಡಿ ಗೌರವಿಸಬೇಕು. ತರಬೇತಿ ಹಾಗೂ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಸರ್ಕಾರಿ ನೌಕರ ಕ್ರೀಡಾಪಟುಗಳಿಗೆ ವೇತನಸಹಿತ ರಜೆ ಕೊಡಬೇಕು. ₹ 20 ಲಕ್ಷ ಉಚಿತ ವಿಮೆ ಒದಗಿಸಬೇಕು. ಮಾಸಾಶನ ಹೆಚ್ಚಿಸಬೇಕು. ಅಂಗವಿಕಲ ಕ್ರೀಡಾಪಟುಗಳಿಗೆ ನುರಿತ ತರಬೇತುದಾರರನ್ನು ನೇಮಿಸಬೇಕು ಎಂಬ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯಲಾಗುವುದು’ ಎಂದು ಹೇಳಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruProtestSportsKarnataka