BLR Today
ಭಾನುವಾರ, ಸೆಪ್ಟೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru53 ನಿಮಿಷಗಳ ಹಿಂದೆ

ಕರ್ನಾಟಕ ವಿಕಾಸ ರಂಗ, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಹೊಸ ಹೆಸರು ಸೂಚಿಸಿದೆ

ಕರ್ನಾಟಕ ವಿಕಾಸ ರಂಗ, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಹೊಸ ಹೆಸರು ಸೂಚಿಸಿದೆ
ಚಿತ್ರ: Asianet Suvarna News

ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರಿನ ಎಲ್ಲ ರಸ್ತೆ, ಕಚೇರಿಗಳಲ್ಲೂ ಜಿಬಿಎ ಎಂದು ಬರೆಯಲಾಗುತ್ತಿದ್ದು, ಬೆಂಗಳೂರು ಎಂಬ ಅಸಲಿ ಹೆಸರೇ ಮಾಯವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಕರ್ನಾಟಕ ವಿಕಾಸ ರಂಗ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬದಲಿಗೆ ಬೃಹತ್ ಬೆಂಗಳೂರು ಪ್ರಾಧಿಕಾರ ಎಂದು ಮರು ನಾಮಕರಣ ಮಾಡಬೇಕು ಎಂದು ಆಗ್ರಹಿಸಿದೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗ್ರೆಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬದಲಿಗೆ ಬೃಹತ್ ಬೆಂಗಳೂರು ಪ್ರಾಧಿಕಾರ ಎಂದು ಮರು ನಾಮಕರಣ ಮಾಡಬೇಕು. ಈ ಕುರಿತು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಕರ್ನಾಟಕ ವಿಕಾಸರಂಗದಿಂದ ಮನವಿ ಸಲ್ಲಿಸಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruGBAKarnataka Vikas RangaD.K. Shivakumar