BLR Today
ಶುಕ್ರವಾರ, ಅಕ್ಟೋಬರ್ 9, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೆಇಎ – PGCET ಚಾಯ್ಸ್ ದಾಖಲಿಸಲು ಅವಕಾಶ

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೆಇಎ – PGCET ಚಾಯ್ಸ್ ದಾಖಲಿಸಲು ಅವಕಾಶ
ಚಿತ್ರ: Public TV

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ.ಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಎಲ್ಲ ನಾಲ್ಕು ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karmataka Examination Authority) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಅ.13ರಂದು ಬೆಳಿಗ್ಗೆ 10 ಗಂಟೆವರೆಗೆ ಚಾಯ್ಸ್ ಹಾಕಬಹುದು. ಈಗಾಗಲೇ ಕಾಲೇಜುಗಳಲ್ಲಿ ಪ್ರವೇಶ ಪಡೆದವರು ಹಾಗೂ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡವರಿಗೆ ಚಾಯ್ಸ್-2 ದಾಖಲಿಸಿ ಇನ್ನೂ ಉತ್ತಮ ಸೀಟಿಗೆ ಅಪ್ ಗ್ರೇಡ್ ಆಗಲು ಅವಕಾಶ ನೀಡಲಾಗಿದೆ. ಅಲ್ಲದೆ ಅ.13ರಂದು ಮಧ್ಯಾಹ್ನ 2ರಿಂದ ಅ.15ರ ಬೆಳಿಗ್ಗೆ 10ಗಂಟೆವರೆಗೆ ಆಪ್ಷನ್ಸ್ ಅನ್ನು ಮೇಲೆ-ಕೆಳಗೆ (Re-Arrange) ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ ಎಂದು ವಿವರಿಸಿದ್ದಾರೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
educationKEAPGCETBengaluru