ಯುಜಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ 3ನೇ ಸುತ್ತಿನ ತಾತ್ಕಾಲಿಕ ಫಲಿತಾಂಶವನ್ನು KEA ಪ್ರಕಟಿಸಿದೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ 3ನೇ ಸುತ್ತಿನ ತಾತ್ಕಾಲಿಕ ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ. ಎಂಸಿಸಿ ಮತ್ತು ಕೆಇಎ ಎರಡೂ ಕಡೆ ಸೀಟು ಪಡೆದ ಅಭ್ಯರ್ಥಿಗಳು, 3ನೇ ಸುತ್ತಿನಲ್ಲಿ ಎಂಸಿಸಿ ಸೀಟಿಗೆ ಪ್ರವೇಶ ಪಡೆಯಲು ಅ.5ರಂದು ಮಧ್ಯಾಹ್ನ 12 ಗಂಟೆಯೊಳಗೆ ವೆಬ್ ಸೈಟ್ ಲಿಂಕ್‌ನಲ್ಲಿ 'ಚಾಯ್ಸ್-4' ಹಾಕಿ ಕೌನ್ಸೆಲಿಂಗ್ ನಿಂದ ಉಚಿತವಾಗಿ ಹೊರಹೋಗಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಕೆಇಎ ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟಿಗೆ ಈಗಾಗಲೇ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ಎಂಸಿಸಿ 3ನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ, ಅಲ್ಲಿ ಪ್ರವೇಶ ಪಡೆಯಲು ಇಚ್ಛೆ ಇದ್ದಲ್ಲಿ ಅ.5ರಂದು ಮಧ್ಯಾಹ್ನ 12 ಗಂಟೆಯೊಳಗೆ 10 ಸಾವಿರ ರೂಪಾಯಿ ದಂಡ ಕಟ್ಟಿ ಕೆಇಎ ಸೀಟು ರದ್ದುಪಡಿಸಿಕೊಳ್ಳಬಹುದು ಎಂದು ಅವರು ವಿವರಿಸಿದ್ದಾರೆ.
ಮೂಲ ವರದಿ: Public TV
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
educationBengaluruKEAUG MedicalDental Course
