BLR Today
ಮಂಗಳವಾರ, ಅಕ್ಟೋಬರ್ 6, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಇಡಿ ದಾಳಿ ಬೆನ್ನಲ್ಲೇ ಶಿವಶಂಕರಪ್ಪ ಸಾಹುಕಾರ್ ಮತ್ತು ಸದಸ್ಯೆ ಗೀತಾ ಅರೆಸ್ಟ್

ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಇಡಿ ದಾಳಿ ಬೆನ್ನಲ್ಲೇ ಶಿವಶಂಕರಪ್ಪ ಸಾಹುಕಾರ್ ಮತ್ತು ಸದಸ್ಯೆ ಗೀತಾ ಅರೆಸ್ಟ್
ಚಿತ್ರ: Asianet Suvarna News

ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ಹಾಗೂ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭಾರಿ ಅಕ್ರಮ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ತೀವ್ರಗೊಳಿಸಿದೆ. ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಹಾಲಿ ಸದಸ್ಯೆ ಡಾ. ಬಿ.ವಿ. ಗೀತಾ ಅವರ ಮನೆಗಳ ಮೇಲೆ ಈಡಿ ಅಧಿಕಾರಿಗಳ ತಂಡ ಭಾರಿ ಶೋಧ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಕೂಡ ಅಧಿಕಾರಿಗಳು ಬಂಧಿಸಿದ್ದಾರೆ. ಸಂಜಯನಗರದಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸಕ್ಕೆ ಎರಡು ಇನೋವಾ ವಾಹನಗಳಲ್ಲಿ ಬಂದಿಳಿದ ನಾಲ್ಕಕ್ಕೂ ಹೆಚ್ಚು ಈಡಿ ಅಧಿಕಾರಿಗಳ ತಂಡ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಯೋಧರ ಕಟ್ಟುನಿಟ್ಟಿನ ಭದ್ರತೆಯಲ್ಲಿ ಬೆಳಿಗ್ಗೆ ಸುಮಾರು 12 ಗಂಟೆಯಿಂದಲೇ ಸುದೀರ್ಘ ಪರಿಶೀಲನೆ ನಡೆಸಿತು. ಕೆಪಿಎಸ್ ಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಡೆದ ಹುದ್ದೆಗಳ ಹಂಚಿಕೆ, ಪ್ರಶ್ನೆಪತ್ರಿಕೆ ಸೋರಿಕೆ, ಬ್ಯಾಂಕ್ ಖಾತೆಗಳ ವಹಿವಾಟು ಹಾಗೂ ಆಸ್ತಿ-ಪಾಸ್ತಿಗಳಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ತೀವ್ರ ತನಿಖೆಗೆ ಒಳಪಡಿಸಿದರು.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruKPSCEDSanjaynagarCrime