ಗೆಜೆಟೆಡ್ ಪ್ರೊಬೇಷನರಿ 319 ಹುದ್ದೆ: ಕೆಪಿಎಸ್‌ಸಿ ದಾಖಲೆ ಅವಧಿಯಲ್ಲಿ ಫಲಿತಾಂಶ
2026–27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 319 ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಪರೀಕ್ಷೆಯಿಂದ 1:15 ಅನುಪಾತದಲ್ಲಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ 4,697 ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್‌ಸಿ ಗುರುವಾರ ಬಿಡುಗಡೆ ಮಾಡಿದೆ. ಸ್ಥಳೀಯ ವೃಂದದ 297 ಹುದ್ದೆಗಳಿಗೆ 4,367 ಹಾಗೂ ಕಲ್ಯಾಣ ಕರ್ನಾಟಕ ವೃಂದದ 22 ಹುದ್ದೆಗಳಿಗೆ 330 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಅರ್ಹತೆ ಪಡೆದ ಅಭ್ಯರ್ಥಿಗಳ ಕೆಟಗರಿವಾರು ಕಟ್ ಆಫ್ ಅಂಕವನ್ನೂ ಕೆಪಿಎಸ್‌ಸಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಒಟ್ಟು 1,47,067 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
KPSCBengaluruRecruitmentEducation


