BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ದಿನಗಳ ಹಿಂದೆ

ಕೆಪಿಎಸ್‌ಸಿ ಹಗರಣದ ಕಿಂಗ್‌ಪಿನ್ ಕನ್ನಾಳೆ ಕಳ್ಳಾಟ ಜೈಲಿನಲ್ಲೂ

ಕೆಪಿಎಸ್‌ಸಿ ಹಗರಣದ ಕಿಂಗ್‌ಪಿನ್ ಕನ್ನಾಳೆ ಕಳ್ಳಾಟ ಜೈಲಿನಲ್ಲೂ
ಚಿತ್ರ: Public TV

ಕೆಪಿಎಸ್‌ಸಿ ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆ ಜೈಲಿನಲ್ಲಿಯೂ ತನ್ನ ಕಳ್ಳಾಟವನ್ನು ಮುಂದುವರಿಸಿದ್ದಾನೆ ಎಂದು ತಿಳಿದುಬಂದಿದೆ. ಹಿಂದೆ ಕನ್ನಾಳೆ ತೀವ್ರ ಮಂಡಿ ನೋವಿದೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಅದರ ಬೆನ್ನಲ್ಲೇ ಕೋರ್ಟ್ 48 ಗಂಟೆಯಲ್ಲಿ ಚಿಕಿತ್ಸೆಗೆ ಕೊಡಿಸಿ ಎಂದು ಸೂಚಿಸಿತ್ತು. ಚಿಕಿತ್ಸೆ ಪಡೆಯುವ ನೆಪದಲ್ಲಿ ಕನ್ನಾಳೆ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದ. ನಂತರ ಡಿಜಿಪಿ ಅಲೋಕ್ ಕುಮಾರ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಸೂಚಿಸಿದ್ದರು. ಸದ್ಯ ಜೈಲಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯಿಂದ ಕನ್ನಾಳೆಯನ್ನು ಬಿಡುಗಡೆ ಮಾಡಿಸಿ, ಮತ್ತೆ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಇತ್ತ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.4ಕ್ಕೆ ಮುಂದೂಡಿಕೆ ಮಾಡಿದೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
KPSCBasavaraj KannaleBengaluruJailCourt