BLR Today
ಸೋಮವಾರ, ಅಕ್ಟೋಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಕೆಪಿಎಸ್ಸಿ ನೇಮಕಾತಿ ಹಗರಣ: ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಕಳ್ಳಾಟ ಬಯಲಾಗುತ್ತಿದೆ

ಕೆಪಿಎಸ್ಸಿ ನೇಮಕಾತಿ ಹಗರಣ: ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಕಳ್ಳಾಟ ಬಯಲಾಗುತ್ತಿದೆ
ಚಿತ್ರ: TV9 Kannada

ಕೆಪಿಎಸ್ಸಿ ನೇಮಕಾತಿ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಹೊಸ ಹೊಸ ಸಂಗತಿಗಳು ಬಯಲಾಗುತ್ತಿವೆ. ಬಸವರಾಜ್ ಕನ್ನಾಳೆ ಕೇವಲ ಒಬ್ಬರು ಅಥವಾ ಇಬ್ಬರಿಗೆ ಮಾತ್ರ ಪ್ರಶ್ನೆಪತ್ರಿಕೆ ನೀಡುವುದಾಗಿ ಜ್ಞಾನೇಂದ್ರ ಕುಮಾರ್‌ಗೆ ತಿಳಿಸಿದ್ದ. ಆದರೆ, ಕನ್ನಾಳೆ 10ಕ್ಕೂ ಹೆಚ್ಚು ಜನರಿಗೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿರುವ ವಿಚಾರವೀಗ ಬಯಲಾಗಿದೆ. ಜ್ಞಾನೇಂದ್ರ ಕುಮಾರ್ ಕನ್ನಾಳೆಯಿಂದ 1.3 ಕೋಟಿ ರೂಪಾಯಿ ನಗದು ಪಡೆದಿದ್ದರು. 23 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಖರೀದಿಸಿದ್ದು, ತನ್ನ ಕುಟುಂಬದ ಇಬ್ಬರಿಗೆ 25 ಲಕ್ಷ ರೂಪಾಯಿ ವರ್ಗಾಯಿಸಿದ್ದರು ಎಂಬುದೂ ತಿಳಿದುಬಂದಿದೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
KPSSCscamBengaluru