ಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್ ಆಪರೇಷನ್' ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ಕೃಪಾ ಆಳ್ವ
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಿಂದ ಉಚ್ಛಾಟಿತರಾಗಿರುವ ಕೃಪಾ ಆಳ್ವಾ ಸೋಮವಾರ ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಸೈಬರ್ ಕ್ರೈಂ ಪೊಲೀಸರು ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ವಿಚಾರಣೆಗೆ ಹಾಜರಾಗಲು ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್ ನೀಡಿತ್ತು. 2 ಗಂಟೆ ವಿಚಾರಣೆ ಬಳಿಕ ಮತ್ತೆ ನವೆಂಬರ್ 11 ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ. ಕೃಪಾ ಆಳ್ವಾ ಪರ ವಕೀಲೆ ನಿಖಿತಾ ಮಾತನಾಡಿ, ಕೃಪಾ ಆಳ್ವಾ ಈಗಾಗಲೇ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿಸಿದರು.
ಮೂಲ ವರದಿ: Kannada Prabha
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPoliticsLegal


