BLR Today
ಗುರುವಾರ, ಅಕ್ಟೋಬರ್ 1, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಸೌತ್ ಇಂಡಿಯನ್ ಬ್ಯಾಂಕ್‌ಗೆ ಮಹೇಶ್ ಪೈ ಸಿಇಒ

ಸೌತ್ ಇಂಡಿಯನ್ ಬ್ಯಾಂಕ್‌ಗೆ ಮಹೇಶ್ ಪೈ ಸಿಇಒ
ಚಿತ್ರ: Prajavani

ಸೌತ್ ಇಂಡಿಯನ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಮಹೇಶ್ ಮುರಳೀಧರ ಪೈ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಕಾರ್ಯತಂತ್ರ, ಆಡಳಿತ, ಡಿಜಿಟಲ್ ಬ್ಯಾಂಕಿಂಗ್, ಟ್ರೆಜರಿ, ವಿದೇಶಿ ವಿನಿಮಯ, ರಿಟೇಲ್ ಬ್ಯಾಂಕಿಂಗ್, ಕೃಷಿ ಮತ್ತು ಎಂಎಸ್‌ಎಂಇ ಸಾಲ ಸೌಲಭ್ಯ ಸೇರಿದಂತೆ ಬ್ಯಾಂಕಿಂಗ್‌ನ ವಿವಿಧ ಕ್ಷೇತ್ರಗಳಲ್ಲಿ ಮಹೇಶ್ ಪೈ ಅವರು ಸುಮಾರು ಮೂರು ದಶಕಗಳ ಅನುಭವ ಹೊಂದಿದ್ದಾರೆ ಎಂದು ಅದು ಹೇಳಿದೆ. ಕೆನರಾ ಬ್ಯಾಂಕ್‌ನ ಮುಖ್ಯ ಜನರಲ್ ಮ್ಯಾನೇಜರ್ ಆಗಿ ಮಹೇಶ್ ಪೈ ಅವರು ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೆ, ನ್ಯೂಯಾರ್ಕ್‌ನಲ್ಲಿರುವ ಕೆನರಾ ಬ್ಯಾಂಕ್‌ನ ವಿದೇಶಿ ಕಾರ್ಯಾಚರಣೆಗಳ ವಿಭಾಗದಲ್ಲಿಯೂ ಅವರು ಕೆಲಸ ಮಾಡಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
South Indian BankMahesh PaiBengaluru