BLR Today
ಮಂಗಳವಾರ, ಸೆಪ್ಟೆಂಬರ್ 29, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru13 ಗಂಟೆಗಳ ಹಿಂದೆ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಕಲಿ ಔಷಧ ಜಾಲದ ಪ್ರಮುಖ ಆರೋಪಿ ಬಂಧನ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಕಲಿ ಔಷಧ ಜಾಲದ ಪ್ರಮುಖ ಆರೋಪಿ ಬಂಧನ
ಚಿತ್ರ: Prajavani

ನಕಲಿ ಔಷಧ ದಂಧೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತಲೆಮರೆಸಿಕೊಂಡಿದ್ದ ಪ್ರಶಾಂತ್‌ ಆರ್‌. ಬಾಬು ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಕಳೆದ ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಪ್ರಶಾಂತ್‌ ಬಾಬು ಅವರು ಸೋಮವಾರ ಮುಂಜಾನೆ ಸುಮಾರು 3.30ರ ವೇಳೆಗೆ ವಿದೇಶದಿಂದ ಬೆಂಗಳೂರಿಗೆ ಬಂದಿದ್ದರು. ವಿಮಾನ ನಿಲ್ದಾಣದ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಎಸ್‌ಐಟಿಗೆ ಮಾಹಿತಿ ನೀಡಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCrimeSITFake MedicineArrest