BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ದಿನಗಳ ಹಿಂದೆ

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಕೃಪಾ ಆಳ್ವಾ ಸಿಸಿಬಿ ಮುಂದೆ ಹಾಜರಾರು

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಕೃಪಾ ಆಳ್ವಾ ಸಿಸಿಬಿ ಮುಂದೆ ಹಾಜರಾರು
ಚಿತ್ರ: TV9 Kannada

ಸ್ಟಿಂಗ್ ಆಪರೇಷನ್ ಪ್ರಕರಣದ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಇದು ಕರ್ನಾಟಕದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಪ್ರಕರಣದ ಸಂಬಂಧ ಖಾಸಗಿ ಮಾಧ್ಯಮದ ಮುಖ್ಯಸ್ಥ ಕೃಪಾ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಸಿಸಿಬಿ ಅಧಿಕಾರಿಗಳು ಆಳ್ವಾರನ್ನು ಎರಡು ಬಾರಿ ವಿಚಾರಣೆಗೊಳಪಡಿಸಿ ನೋಟಿಸ್ ನೀಡಿದ್ದರು. ಇಂದು (ನವೆಂಬರ್ 16) ಮೂರನೇ ಬಾರಿಗೆ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಯ ವೇಳೆ ಆಳ್ವಾ, 'ನನಗೂ ಇದಕ್ಕೂ ಸಂಬಂಧ ಇಲ್ಲ. ನನ್ನನ್ನ ಇದರಲ್ಲಿ ಸಿಕ್ಕಿಹಾಕಿಸಿದ್ದಾರೆ. ವಿಡಿಯೋ ಮಾಡಿದ್ದು ನನಗೆ ಗೊತ್ತೆ ಇರ್ಲಿಲ್ಲ' ಎಂದು ಹೇಳಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCCBKripa AlvaSiddaramaiahSting Operation