ನಿಂತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವು
ಹಿರೀಸಾವೆ: ರಸ್ತೆ ಪಕ್ಕ ಬೈಕ್ ನಲ್ಲಿ ನಿಂತಿದ್ದ ವ್ಯಕ್ತಿಗೆ ಕಾರು ಗುದ್ದಿದ ಪರಿಣಾಮ ಹೋಬಳಿಯ ಮಾಕನಹಳ್ಳಿಯ ಪ್ರಶಾಂತ್ ಕುಮಾರ್ (46) ಭಾನುವಾರ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಮೇಟಿಕೆರೆ ಗೇಟ್ ಬಳಿ ಪ್ರಶಾಂತ್ ಕುಮಾರ್ ರಸ್ತೆ ದಾಟಲು ನಿಂತಿದ್ದರು. ಆ ಸಮಯದಲ್ಲಿ ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು ಇನ್ನೊಂದು ವಾಹನವನ್ನು ಹಿಂದಿಕ್ಕಲು ಹೋಗಿ ನಿಯಂತ್ರಣ ತಪ್ಪಿ ಇವರಿಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಪ್ರಶಾಂತ್ ಕುಮಾರ ಅವರನ್ನು ಆದಚುಂಚನಗಿರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಮೈಸೂರಿಗೆ ಸಾಗಿಸಲಾಗಿತ್ತು. ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಿರೀಸಾವೆ ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.


