BLR Today
ಸೋಮವಾರ, ನವೆಂಬರ್ 9, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluru2 ಗಂಟೆಗಳ ಹಿಂದೆ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇವಿರಮ್ಮ ಬೆಟ್ಟದಲ್ಲಿ ಯುವಕ ಸಾವು; ಕಂಬಿ ಮುರಿದ ಪರಿಣಾಮ 20 ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇವಿರಮ್ಮ ಬೆಟ್ಟದಲ್ಲಿ ಯುವಕ ಸಾವು; ಕಂಬಿ ಮುರಿದ ಪರಿಣಾಮ 20 ಗಾಯ
ಚಿತ್ರ: Kannada Prabha

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ಭಾನುವಾರ ಮುಂಜಾನೆ ಯುವಕನೋರ್ವ ಸಾವನ್ನಪ್ಪಿದ್ದಾರೆ. ಇದಾದ ಬೆನ್ನಲ್ಲೇ ಸಂಭವಿಸಿದ ದುರಂತವೊಂದರಲ್ಲಿ 20 ಮಂದಿ ಗಾಯಗೊಂಡಿದ್ದಾರೆ. ಬೆಟ್ಟ ಏರುತ್ತಿದ್ದ ಬೆಂಗಳೂರು ಮೂಲದ ಲಕ್ಷ್ಮಣ್(35) ಎಂಬ ಯುವಕ ಹೃದಯಾಘಾತದಿಂದ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದರು. ಕಂಬಿ ಮುರಿದ ಪರಿಣಾಮ ಒಬ್ಬರ ಮೇಲೊಬ್ಬರಂತೆ ಬಿದ್ದು 20 ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೂಲ ವರದಿ: Kannada Prabha ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
ChikkamagaluruDeviramma HillDeepavaliAccidentDeath