BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru2 ದಿನಗಳ ಹಿಂದೆ

₹2186.20 ಕೋಟಿ ಹಣ ತಡೆಹಿಡಿದ ಕೇಂದ್ರದ ವಿರುದ್ಧ ಎಸ್‌ಎಲ್‌ಪಿ ಸಲ್ಲಿಸಲು ಸಚಿವರು ಸಲಹೆ

₹2186.20 ಕೋಟಿ ಹಣ ತಡೆಹಿಡಿದ ಕೇಂದ್ರದ ವಿರುದ್ಧ ಎಸ್‌ಎಲ್‌ಪಿ ಸಲ್ಲಿಸಲು ಸಚಿವರು ಸಲಹೆ
ಚಿತ್ರ: Prajavani

ರಾಜ್ಯದ ಗ್ರಾಮಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬಿಡುಗಡೆ ಮಾಡಬೇಕಾದ ₹2186.20 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ತಡೆಹಿಡಿದಿರುವ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ತೆರವು ಅರ್ಜಿ (ಎಸ್.ಎಲ್.ಪಿ.) ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ತಮ್ಮ ಕಚೇರಿಯಲ್ಲಿಂದು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರೊಂದಿಗೆ ಸಮಾಲೋಚಿಸಿದ ಸಚಿವರು, ರಾಜ್ಯ ಸರ್ಕಾರ ಹಲವು ಮನವಿ ಮಾಡಿದರೂ, ಅಗತ್ಯ ದಾಖಲಾತಿ ಸಲ್ಲಿಸಿದರೂ 2025-26ನೇ ಸಾಲಿನ 2186.20 ಕೋಟಿ ರೂ. ಬಿಡುಗಡೆ ಮಾಡದ ಕೇಂದ್ರದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದು ಮಾತ್ರ ಉಳಿದಿರುವ ಏಕೈಕ ಮಾರ್ಗ ಎಂದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ. ಇದೇ ಸುದ್ದಿ ವರದಿ ಮಾಡಿದ ಇತರ ಮಾಧ್ಯಮಗಳು: The New Indian Express, Public TV, TV9 Kannada
BengaluruPoliticsFinancePanchayat Raj