BLR Today
ಶನಿವಾರ, ನವೆಂಬರ್ 28, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluruಅಕ್ಟೋಬರ್ 13, 2026

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮೈಸೂರು ದಸರಾ ಮತ್ತು ಗೊಂಬೆಗಳ ಪ್ರದರ್ಶನ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮೈಸೂರು ದಸರಾ ಮತ್ತು ಗೊಂಬೆಗಳ ಪ್ರದರ್ಶನ
ಚಿತ್ರ: TV9 Kannada

ವಿಶ್ವ ವಿಖ್ಯಾತ ಮೈಸೂರು ದಸರಾ ಮತ್ತು ನವರಾತ್ರಿಯ ಸಂಭ್ರಮವನ್ನು ದೇಶ-ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಪರಿಚಯಿಸುವ ನಿಟ್ಟಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ದಸರಾ ಸಂಭ್ರಮ' ಆಯೋಜಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2ರಲ್ಲಿ ಮೈಸೂರು ಪೇಟ ಮತ್ತು ಬಣ್ಣ-ಬಣ್ಣದ ಲೈಟಿಂಗ್‌ನ ಗೊಂಬೆಗಳ ಕಲಾಕೃತಿಗಳನ್ನು ಪ್ರದರ್ಶಿಸಲಾಗಿದೆ. ಯಾಣಿಕರ ಮನರಂಜನೆಗಾಗಿ ಪ್ರತಿದಿನ ಸಂಜೆ ವಿವಿಧ ಜಾನಪದ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ. ಇದೇ ಸುದ್ದಿ ವರದಿ ಮಾಡಿದ ಇತರ ಮಾಧ್ಯಮಗಳು: Prajavani
BengaluruAirportCultureDasaraTravel