ಎನ್ ಸ್ಕ್ವೇರ್ ಎಂಟರ್ಪ್ರೈಸಸ್ ಮಾಲೀಕನಿಗೆ 42 ಕೋಟಿ ತೆರಿಗೆ ವಂಚನೆ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು
ಪಾನ್ ಮಸಾಲಾ ಉತ್ಪಾದನೆಗೆ ಬಳಸುತ್ತಿದ್ದ ಯಂತ್ರಗಳ ವಿವರ ಘೋಷಿಸದೆ ₹42 ಕೋಟಿ ತೆರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಎನ್ ಸ್ಕ್ವೇರ್ ಎಂಟರ್ ಪ್ರೈಸಸ್ ಮಾಲೀಕ ಎಸ್.ನಿತ್ಯಾನಂದ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ನಿತ್ಯಾನಂದ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ನಿತ್ಯಾನಂದ ಪರ ಹೈಕೋರ್ಟ್ ವಕೀಲ ಎಸ್.ಸುನಿಲ್ ಕುಮಾರ್ ಅವರ ವಾದವನ್ನು ಪುರಸ್ಕರಿಸಿರುವ ನ್ಯಾಯಪೀಠ, ‘ಅರ್ಜಿದಾರರು ₹1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು’ ಎಂಬುದೂ ಸೇರಿದಂತೆ ಸಾಂಪ್ರದಾಯಿಕ ಷರತ್ತುಗಳನ್ನು ವಿಧಿಸಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruTax EvasionHigh CourtN Square Enterprises
