BLR Today
ಸೋಮವಾರ, ಅಕ್ಟೋಬರ್ 26, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಝೈದ್ ಖಾನ್‌ಗೆ ಅವಮಾನ: ಧನ್ವೀರ್ ವಿರುದ್ಧ NSUI ದೂರು, ಅಭಿಮಾನಿಗಳಿಂದ ಪ್ರತಿಭಟನೆ

ಝೈದ್ ಖಾನ್‌ಗೆ ಅವಮಾನ: ಧನ್ವೀರ್ ವಿರುದ್ಧ NSUI ದೂರು, ಅಭಿಮಾನಿಗಳಿಂದ ಪ್ರತಿಭಟನೆ
ಚಿತ್ರ: Kannada Prabha

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ನಟ ಧನ್ವೀರ್ ಗೌಡ ನಡುವಿನ ಕೋಲ್ಡ್ ವಾರ್ ಈಗ ಮತ್ತೊಂದು ಮಜಲನ್ನು ಪಡೆದುಕೊಂಡಿದೆ. ಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಝಮೀರ್ ಅಹ್ಮದ್ ಖಾನ್ ಅವರ ಪುತ್ರ ಝೇದ್ ಖಾನ್ ಬಗ್ಗೆ ನಟ ಧ್ವನ್ವೀರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ NSUI ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಗೆ ದೂರು ನೀಡಿದೆ. ಮತ್ತೊಂದೆಡೆ ಜಮೀರ್ ಅಭಿಮಾನಿಗಳು, ಚನ್ನಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಧನ್ವೀರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಮೀರ್ ಅಭಿಮಾನಿಗಳು ಚನ್ನಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಜಮೀರ್ ಅಭಿಮಾನಿ ಬಳಗದ ಅಧ್ಯಕ್ಷ ಮಹಮದ್ ತೌಸಿಫ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಧನ್ವೀರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಮೂಲ ವರದಿ: Kannada Prabha ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruNSUIDhanveerZaid KhanChannapatna