ಇಂಧನ ಇಲಾಖೆಯ ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅ. 5ರಿಂದ
ಇಂಧನ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಬೇಕೆಂದು ಒತ್ತಾಯಿಸಿ ಕೆಪಿಟಿಸಿಎಲ್, ಎಸ್ಕಾಂ ಹೊರಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಇದೇ 5ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆಯೋಜಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಎಂ.ಎಸ್.ಲೀಲಾಸಾಗರ್ ತಿಳಿಸಿದರು. ಮೀಟರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಜೀತದ ಮಾದರಿಯಲ್ಲಿ ವೇತನ ನೀಡಲಾಗುತ್ತಿದೆ ಎಂದು ಅವರು ದೂರಿದರು. ಸೇವಾ ಭದ್ರತೆ ಮತ್ತು ವಿಮಾ ಸೌಲಭ್ಯ ನೀಡಬೇಕು ಹಾಗೂ ರಜಾ ದಿನಗಳಲ್ಲಿ ಕೆಲಸ ನಿರ್ವಹಿಸಿದರೆ ದುಪ್ಪಟ್ಟು ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPower DepartmentStrikeLabor Dispute


