BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru2 ದಿನಗಳ ಹಿಂದೆ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎರಡನೇ ಬಾರಿ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಪವಿತ್ರಾ ಗೌಡ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎರಡನೇ ಬಾರಿ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಪವಿತ್ರಾ ಗೌಡ
ಚಿತ್ರ: Public TV

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲುಪಾಲಾಗಿರುವ ಆರೋಪಿ ಪವಿತ್ರಾ ಗೌಡ ಇದೀಗ ಎರಡನೇ ಬಾರಿಗೆ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದ ಬಳಿಕ CRPC 439 ಅಡಿಯಲ್ಲಿ ಪವಿತ್ರಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇಂದು (ನ.24) ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಷರತ್ತುಗಳನ್ನು ವಿಧಿಸಿ ಜಾಮೀನು ನೀಡುವಂತೆ ಪವಿತ್ರಗೌಡ ಪರ ವಕೀಲರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ. ಇದೇ ಸುದ್ದಿ ವರದಿ ಮಾಡಿದ ಇತರ ಮಾಧ್ಯಮಗಳು: Asianet Suvarna News
crimelegalBengaluru