ಕಾನ್ಸ್ಟೆಬಲ್ ನೇಮಕಾತಿಗೆ ದೇಹದಾರ್ಢ್ಯ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ
ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆ.ಕೆ) ಹುದ್ದೆಗಳ ನೇಮಕಾತಿಗೆ ದೇಹದಾರ್ಢ್ಯ ಹಾಗೂ ಸಹಿಷ್ಣುತಾ ಪರೀಕ್ಷೆಯ ವೇಳಾಪಟ್ಟಿಯನ್ನು ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಬಿಡುಗಡೆ ಮಾಡಿದೆ. ಒಟ್ಟು 3,991 ಹುದ್ದೆಗಳ ಭರ್ತಿಗೆ ಪೊಲೀಸ್ ನೇಮಕಾತಿ ವಿಭಾಗವು ಪ್ರಕ್ರಿಯೆ ಆರಂಭಿಸಿದೆ. ಒಟ್ಟು 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗಳಲ್ಲಿ ಭಾಗವಹಿಸಲಿದ್ದಾರೆ. ಆರ್ಪಿಸಿ ಪರೀಕ್ಷೆಗಳು ಸೆ.28ರಿಂದ ಅ.5ರ ವರೆಗೆ ಸಿಎಆರ್(ಎಚ್ಕ್ಯೂ) ಚಾಮರಾಜಪೇಟೆಯ ಸಿರ್ಸಿ ಸರ್ಕಲ್ ಮೈದಾನ, ಆಡುಗೋಡಿಯ ಸಿಎಆರ್ (ದಕ್ಷಿಣ) ಮೈದಾನ ಹಾಗೂ ಆರ್.ಕೆ. ಹೆಗಡೆ ನಗರದ ಸಿಎಆರ್(ಉತ್ತರ) ಮೈದಾನದಲ್ಲಿ ನಡೆಯಲಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPoliceRecruitmentJob


